ಭಾರತ, ಏಪ್ರಿಲ್ 2 -- ಬೆಂಗಳೂರು: ರಾಜ್ಯದ ಹೆಡ್ ಕಾನ್‌ಸ್ಟೆಬಲ್‌ಗಳು ಮತ್ತು ಕಾನ್‌ಸ್ಟೆಬಲ್‌ಗಳು ಧರಿಸುತ್ತಿರುವ ಸ್ಲೋಚ್‌ ಹ್ಯಾಟ್‌ ಅನ್ನು ಬದಲಾವಣೆ ಮಾಡಲು ರಾಜ್ಯ ಪೊಲೀಸ್ ಇಲಾಖೆ ಕೊನೆಗೂ ಮುಂದಾಗಿದೆ. ಈ ಟೋಪಿಯನ್ನು ಬದಲಾಯಿಸುವಂತೆ ಹಲವಾರು ವರ್ಷಗಳಿಂದ ಬೇಡಿಕೆ ಕೇಳಿ ಬರುತ್ತಿತ್ತು. ತಮಿಳುನಾಡು, ಆಂಧ್ರಪ್ರದೇಶ, ಕೇರಳ ರಾಜ್ಯಗಳಲ್ಲಿ ಕಾನ್‌ಸ್ಟೆಬಲ್‌ಗಳಿಗೆ ಪೀಕ್ ಕ್ಯಾಪ್‌ಗಳನ್ನು ನಿಗದಿಪಡಿಸಲಾಗಿದೆ. ರಾಜ್ಯದಲ್ಲೂ ಅದೇ ಮಾದರಿ ಟೋಪಿಯನ್ನು ಜಾರಿಗೊಳಿಸುವ ಸಾಧ್ಯತೆಗಳು ಹೆಚ್ಚು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸಂಬಂಧ ಏಪ್ರಿಲ್‌ 4ರಂದು ಸಭೆ ನಡೆಯಲಿದೆ. ಸಾಧಕ-ಭಾದಕಗಳ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸಶಸ್ತ್ರ ಮೀಸಲು ಪಡೆ (ಕೆಎಸ್ಆರ್‌ಪಿ) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಅಧ್ಯಕ್ಷತೆಯಲ್ಲಿ ಪೊಲೀಸ್ ಕಿಟ್ ನಿರ್ದಿಷ್ಟತಾ ಸಮಿತಿ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಇಲಾಖೆಯ ಅಧಿಕಾರ...