Bangalore, ಫೆಬ್ರವರಿ 9 -- Invest Karnataka 2025:ಕರ್ನಾಟಕದ ಬಹುನಿರೀಕ್ಷಿತ ಜಾಗತಿಕ ಹೂಡಿಕೆದಾರರ ಸಮಾವೇಶ ಬೆಂಗಳೂರಿನಲ್ಲಿ ಫೆಬ್ರವರಿ 11ರಿಂದ ನಾಲ್ಕು ದಿನಗಳ ಕಾಲ ನಡೆಯಲಿದೆ. ಭಾರತ ಮಾತ್ರವಲ್ಲದೇ ವಿಶ್ವದ ನಾನಾ ಭಾಗಗಳಿಂದ ಉದ್ಯಮಿಗಳು, ನಾನಾ ಕ್ಷೇತ್ರದ ತಜ್ಞರು ಸಮಾವೇಶದಲ್ಲಿ ಭಾಗಿಯಾಗುತ್ತಿದ್ದಾರೆ. ಕೈಗಾರಿಕೆ. ನಾವಿನ್ಯತೆ, ಕೌಶಲ್ಯ, ಉದ್ಯಮ ಸಹಿತ ಹಲವು ವಲಯಗಳ ಕುರಿತು ನಾಲ್ಕು ದಿನ ಎಲ್ಲಾ ಆಯಾಮಗಳಲ್ಲೂ ಚರ್ಚೆಯಾಗಲಿವೆ. ಸಮಾವೇಶದ ಉದ್ಘಾಟನೆಯು ಫೆ.11ರ ಸಂಜೆ 4ಕ್ಕೆ ನಡೆಯಲಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಲಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಉಪಸ್ಥಿತಿಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೂ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ 2025-30ರ ಅವಧಿಯ ನೂತನ ಕೈಗಾರಿಕಾ ನೀತಿ ಮತ್ತು ಕೈಗಾರಿಕಾ ಯೋಜನೆಗಳಿಗೆ ತ್ವರಿತ ಅನುಮೋದನೆ ನೀಡಲು ಏಕಗವಾಕ್ಷಿ ಪೋರ್ಟಲ್ ಬಿಡುಗಡೆ ಮಾಡಲು ಸಿದ್ದತೆ ಮಾಡಿಕೊಳ್ಳಲಾಗಿದೆ...