Bangalore, ಏಪ್ರಿಲ್ 23 -- ಬೆಂಗಳೂರು: ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಸುವ ಜನರಿಗೆ ಡಿಜಿಟಲ್‌ ಜಾಹೀರಾತುಗಳ ಮೂಲಕ ತಲುಪಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ - 2024 ಅನ್ನು ಜಾರಿಗೆ ತಂದಿದೆ. ಕರ್ನಾಟಕ ಸರ್ಕಾರವು ಡಿಜಿಟಲ್‌ ಜಾಹೀರಾತಿಗಾಗಿ ಡಿಜಿಟಲ್‌ ಜಾಹೀರಾತು ಏಜೆನ್ಸಿ ಮತ್ತು ಡಿಜಿಟಲ್‌ ಮಾಧ್ಯಮಗಳನ್ನು ಎಂಪ್ಯಾನಲ್‌ಮೆಂಟ್‌ ಮಾಡಿಕೊಳ್ಳುತ್ತಿದೆ. ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಡಿಜಿಟಲ್‌ ಏಜೆನ್ಸಿ ಮತ್ತು ಮಾಧ್ಯಮಗಳನ್ನು ನೊಂದಾಯಿಸಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಕೆಲವು ವರ್ಷಗಳಿಂದ ಮಾಧ್ಯಮದ ವ್ಯಾಪ್ತಿ ಮತ್ತು ಸ್ವರೂಪ ಬದಲಾಗಿದೆ. ಅಂತರ್ಜಾಲ, ಖಾಸಗಿ ಕಂಪ್ಯೂಟರ್‌, ಸ್ಮಾರ್ಟ್‌ ಟಿವಿ ಹಾಗೂ ಸ್ಮಾರ್ಟ್‌ ಫೋನ್‌, ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗಿದೆ. ಸಾಂಪ್ರದಾಯಿಕ ಜಾಹೀರಾತುಗಳಿಗಿಂತ ಡಿಜಿಟಲ್‌ ಜಾಹೀರಾತು ಹೆಚ್ಚು ಪ್ರಭಾವಶಾಲಿಯಾಗಿದೆ. ಜೊತೆಗೆ, ಹೆಚ್ಚು ವ್ಯಾಪ್ತಿ ...