ಭಾರತ, ಏಪ್ರಿಲ್ 24 -- ದ್ವಿತೀಯ ಪಿಯುಸಿ ಪರೀಕ್ಷೆ 2: ಕರ್ನಾಟಕದಲ್ಲಿ ಇಂದಿನಿಂದ (ಏಪ್ರಿಲ್ 24) ಮೇ 8ರ ತನಕ ದ್ವಿತೀಯ ಪಿಯುಸಿ ಪರೀಕ್ಷೆ 2 ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಪರೀಕ್ಷೆ ನಡೆಸುತ್ತಿದ್ದು, ಎರಡನೇ ಹಂತದ ದ್ವಿತೀಯ ಪಿಯುಸಿ ಪರೀಕ್ಷೆಯು ಏ. 24 ರಿಂದ ಮೇ 8 ರ ವರೆಗೆ ಬೆಳಿಗ್ಗೆ 10 ಗಂಟೆ ಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದ್ದು, 2.27 ಲಕ್ಷ ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 70,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಂಕ ಸುಧಾರಣೆಗೆ ಪ್ರಯತ್ನ ನಡೆಸಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಎರಡನೇ ಹಂತದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಇಂದಿನಿಂದ ಮೇ 8 ರ ತನಕ ನಡೆಸುತ್ತಿದೆ. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆ 2ರಲ್ಲಿ 2.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 1.57 ಲಕ್ಷ ವಿದ್ಯಾರ್ಥಿಗಳು ಒಂದು ಅಥವಾ ಹೆಚ್ಚು ವಿಷಯಗಳಲ್ಲಿ ಅನುತ್ತೀರ್...