ಭಾರತ, ಏಪ್ರಿಲ್ 24 -- ದ್ವಿತೀಯ ಪಿಯುಸಿ ಪರೀಕ್ಷೆ 2: ಕರ್ನಾಟಕದಲ್ಲಿ ಇಂದಿನಿಂದ (ಏಪ್ರಿಲ್ 24) ಮೇ 8ರ ತನಕ ದ್ವಿತೀಯ ಪಿಯುಸಿ ಪರೀಕ್ಷೆ 2 ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಪರೀಕ್ಷೆ ನಡೆಸುತ್ತಿದ್ದು, ಎರಡನೇ ಹಂತದ ದ್ವಿತೀಯ ಪಿಯುಸಿ ಪರೀಕ್ಷೆಯು ಏ. 24 ರಿಂದ ಮೇ 8 ರ ವರೆಗೆ ಬೆಳಿಗ್ಗೆ 10 ಗಂಟೆ ಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದ್ದು, 2.27 ಲಕ್ಷ ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 70,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಂಕ ಸುಧಾರಣೆಗೆ ಪ್ರಯತ್ನ ನಡೆಸಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್ಇಎಬಿ) ಎರಡನೇ ಹಂತದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಇಂದಿನಿಂದ ಮೇ 8 ರ ತನಕ ನಡೆಸುತ್ತಿದೆ. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆ 2ರಲ್ಲಿ 2.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 1.57 ಲಕ್ಷ ವಿದ್ಯಾರ್ಥಿಗಳು ಒಂದು ಅಥವಾ ಹೆಚ್ಚು ವಿಷಯಗಳಲ್ಲಿ ಅನುತ್ತೀರ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.