Bangalore, ಫೆಬ್ರವರಿ 14 -- ಬೆಂಗಳೂರು: ಈಗಾಗಲೇ ಭಾರತದಲ್ಲಿ ಎಲೆಕ್ಟ್ರಿಕ್‌ ವಾಹನಗಳ ಬಳಕೆ ಹೆಚ್ಚಾಗಿದೆ. ದ್ವಿಚ್ರಕವಾಹನ, ನಾಲ್ಕು ಚಕ್ರಗಳ ವಾಹನಗಳ ಬಳಕೆಯಲ್ಲಿ ಹಲವು ನಗರಗಳು ಮುಂಚೂಣಿಯಲ್ಲಿವೆ. ಕರ್ನಾಟಕವೂ ವಿದ್ಯುತ್‌ ವಾಹನಗಳ ಬಳಕೆಗೆ ನಿರಂತರವಾಗಿ ಉತ್ತೇಜನ ನೀಡುತ್ತಲೇ ಬರುತ್ತಿದೆ. ಇದರ ಮುಂದುವರೆದ ಭಾಗವಾಗಿ ಪರಿಸರ ಸ್ನೇಹಿ ಸಾರಿಗೆ ನೀತಿ ರೂಪಿಸಿದೆ. ವಿದ್ಯುತ್ ಮತ್ತು ಹೈಡ್ರೋಜನ್ ಚಾಲಿತ ವಾಹನ ತಯಾರಿಕೆ ವಲಯಕ್ಕೆ ಮುಂದಿನ 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಆಕರ್ಷಿಸಿ, 1 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಿರುವ ಮುಂದಿನ ಐದು ವರ್ಷಗಳ ಅವಧಿಯ ಪರಿಸರಸ್ನೇಹಿ ಸಾರಿಗೆ ನೀತಿಯನ್ನು ಇಂಧನ ಸಚಿವ ಕೆ ಜೆ ಜಾರ್ಜ್ ಶುಕ್ರವಾರ ಹೂಡಿಕೆದಾರರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಬಿಡುಗಡೆ ಮಾಡಿದರು.

ನೀತಿಯ ಬಗ್ಗೆ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ, ಇದಕ್ಕಾಗಿ ಗೌರಿಬಿದನೂರು, ಧಾರವಾಡ ಮ್ತತು ಹಾರೋಹಳ್ಳಿಯಲ್ಲಿ ಪರಿಸರಸ್ನೇಹಿ ಇಂಧನ ಕ್ಲಸ...