ಭಾರತ, ಮಾರ್ಚ್ 22 -- ಹುಬ್ಬಳ್ಳಿ: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರರು ನಡೆಸುವ ದೌರ್ಜನ್ಯ, ದಬ್ಬಾಳಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಬೆಂಬಲಿಸಿ ನಗರದಲ್ಲಿಂದು ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೆಲ ಸಮಯದವರೆಗೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ತಹಶೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನಗರದ ಕಿತ್ತೂರ ಚೆನ್ನಮ್ಮ ಸರ್ಕಲ್‌ನಲ್ಲಿ ಕರುನಾಡ ವಿಜಯ ಸೇನೆ ಕಾರ್ಯಕರ್ತರು ಬಸ್‌ಗಳನ್ನು ತಡೆದು ಕೆಲಹೊತ್ತು ಪ್ರತಿಭಟನೆ ನಡೆಸಿ ಪುಂಡಾಟಿಕೆ ಮೆರೆದ ಎಂಇಎಸ್ ಸಂಘಟನೆಯನ್ನು ಕರ್ನಾಟಕದಲ್ಲಿ ನಿಷೇಧಿಸುವಂತೆ ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ಮಹಾಂತಯ್ಯ, ಕುಮಾರ ಲಕ್ಕಮ್ಮನವರ, ಹ.ನೀ. ದೀಪಕ್, ಆರ್.ಎಸ್. ಮಹೇಶ, ಶಿವಪುತ್ರ ಗಾಣದಾಳ ಸೇರಿದಂತೆ ಅನೇಕರಿದ್ದರು.

ಇನ್ನೊಂದೆಡೆ ಕರ್ನಾಟಕ ಜನ ಸೇನಾ(ರಿ) ಕಾರ್ಯಕರ್ತರು ಪ್ರಕಾಶ ನಾಯಕ್ ನೇತೃತ್ವದಲ್ಲಿ ಎಂಇಎಸ್ ಪುಂಡರ ಪ್ರತಿಕೃತಿ ದಹನ ಮಾಡುವ ಮೂಲಕ ಆಕ್ರೋಶ ವ್ಯಕ...