ಭಾರತ, ಮಾರ್ಚ್ 7 -- Karnataka Budget 2025: ಕರ್ನಾಟಕದ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಈ ಸಲದ ಕರ್ನಾಟಕ ಬಜೆಟ್‌ನಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ|| ಮನಮೋಹನ್‌ ಸಿಂಗ್‌ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಪ್ರಸ್ತಾಪ, ಮೈಸೂರು ವಿವಿಯಲ್ಲಿ ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠ ಸೇರಿ 14 ಉನ್ನತ ಶಿಕ್ಷಣ ಉಪಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಮಹಿಳಾ ಉನ್ನತ ಶಿಕ್ಷಣ ಬಲವರ್ಧನೆ ವಿಚಾರಗಳೂ ಪಟ್ಟಿಯಲ್ಲಿವೆ.

1) ಬೆಂಗಳೂರು ನಗರ ವಿವಿ ಮರುನಾಮಕರಣ: ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ|| ಮನಮೋಹನ್‌ ಸಿಂಗ್‌ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್‌.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.

2) ಪ್ರಥಮ ದರ್ಜೆ ಕಾಲೇಜು ಬಲವರ್ಧನ...