ಭಾರತ, ಮಾರ್ಚ್ 7 -- Karnataka Budget 2025: ಕರ್ನಾಟಕದ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ಮಾಡುವ ಕಡೆಗೆ ಕರ್ನಾಟಕ ಸರ್ಕಾರ ಗಮನಹರಿಸಿದೆ. ಈ ಸಲದ ಬಜೆಟ್‌ನಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಉಪಕ್ರಮಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಥಣಿ, ಹುನಗುಂದ, ಮುಧೋಳದಲ್ಲಿ 50 ಹಾಸಿಗೆ ಸಾಮರ್ಥ್ಯದ ತಾಯಿ ಮಕ್ಕಳ ಆಸ್ಪತ್ರೆ ಸ್ಥಾಪನೆ ಸೇರಿ, ಆರೋಗ್ಯ ಕ್ಷೇತ್ರದ ಮೂಲಸೌಕರ್ಯಕ್ಕೆ ಸಂಬಂಧಿಸಿ 15 ಅಂಶಗಳನ್ನು ಬಜೆಟ್ ಭಾಷಣದಲ್ಲಿ ಪ್ರಕಟಿಸಿದ್ದಾರೆ.

1) ಕರ್ನಾಟಕದಲ್ಲಿ 14 ಕ್ರಿಟಿಕಲ್ ಕೇರ್ ಬ್ಲಾಕ್‌ಗಳ ಸ್ಥಾಪನೆ: ಕರ್ನಾಟಕದಲ್ಲಿ 50 ಹಾಸಿಗೆ ಸಾಮರ್ಥ್ಯದ 14 ಕ್ರಿಟಿಕಲ್ ಕೇರ್ ಬ್ಲಾಕ್‌ಗಳು (Critical Care Block) ಹಾಗೂ ಬೆಂಗಳೂರು ನಗರದಲ್ಲಿ 100 ಹಾಸಿಗೆ ಸಾಮರ್ಥ್ಯದ ಒಂದು ಕ್ರಿಟಿಕಲ್ ಕೇರ್ ಬ್ಲಾಕ್‌ (Critical Care Block) ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ತಿಳಿಸಿದರು.

2) ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸ್ಥಾಪನೆ: ...