ಭಾರತ, ಮಾರ್ಚ್ 7 -- Karnataka Budget 2025: ಆಶಾ ಕಾರ್ಯಕರ್ತೆಯ ಬೇಡಿಕೆಗಳ ಪೈಕಿ ಗೌರವಧನ ಹೆಚ್ಚು ಮಾಡಲು ಕರ್ನಾಟಕ ಸರ್ಕಾರ ಮುಂದಾಗಿದ್ದು, 1000 ರೂಪಾಯಿ ಹೆಚ್ಚಳವನ್ನು ಪ್ರಕಟಿಸಿದೆ. ಈ ಹೆಚ್ಚಳ ಮುಂದಿನ ಹಣಕಾಸು ವರ್ಷದಿಂದ ಜಾರಿಗೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಜೆಟ್ ಭಾಷಣದಲ್ಲಿ ಈ ಸಂಬಂಧ ವಿವರ ಪ್ರಕಟಿಸಿದರು. ಇದಲ್ಲದೆ, ಕರ್ನಾಟಕ ಸರ್ಕಾರದ 3 ಲಕ್ಷಕ್ಕೂ ಹೆಚ್ಚು ಸಂಖ್ಯೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ನಗದು ರಹಿತ ಚಿಕಿತ್ಸೆ ಸೌಲಭ್ಯ ಒದಗಿಸುವುದಾಗಿ ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.

ಕರ್ನಾಟಕದಲ್ಲಿ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು 1,000 ರೂ. ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ಹೇಳಿದರು.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮೂರು ಲಕ್ಷಕ್ಕೂ ಅಧಿಕ ಸಿಬ್ಬಂದಿ ವರ್ಗ ಹಾಗೂ ಅವಲಂಬಿತರಿಗೆ 5 ಲಕ್ಷ ರೂ. ವರೆ...