ಭಾರತ, ಮಾರ್ಚ್ 7 -- Karnataka Budget 2025: ಕರ್ನಾಟಕದ 2025-26ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ಕ್ಷೇತ್ರಕ್ಕೆ ಬಹಳಷ್ಟು ಕೊಡುಗೆ ಪ್ರಕಟಿಸಿದ್ದಾರೆ. ಮುಖ್ಯವಾಗಿ ರೈತರ ಜೀವನೋಪಾಯವನ್ನು ಸುಧಾರಿಸಲು ʻಸಮಗ್ರ ಮಳೆಯಾಶ್ರಿತ ಕೃಷಿ ನೀತಿʼಯನ್ನು ಅನುಷ್ಠಾನಗೊಳಿಸುವುದಾಗಿ ಘೋಷಿಸಿದರು. ಇದಲ್ಲದೆ, ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಘೋಷಣೆ ಮಾಡಿದ್ದು, ಅದಕ್ಕೆ ಮೂಲಸೌಕರ್ಯಕ್ಕೆ ಅನುದಾನ ಹಂಚಿಕೆ ಮಾಡಿ ಈ ವರ್ಷವೇ ತರಗತಿ ಶುರುಮಾಡುವುದಾಗಿ ಹೇಳಿದರು.

ಕರ್ನಾಟಕ ರಾಜ್ಯದ ಸಾಗುವಳಿ ಪ್ರದೇಶದ ಶೇ.64ರಷ್ಟು ಪ್ರದೇಶವು ಮಳೆಯಾಶ್ರಿತ ಪ್ರದೇಶವಾಗಿದ್ದು, ಮಳೆಯಾಶ್ರಿತ ಕೃಷಿಯನ್ನು ಜೀವನಾಧಾರವಾಗಿಸಿ ಸುಸ್ಥಿರವನ್ನಾಗಿಸಲು ಹಾಗೂ ರೈತರ ಜೀವನೋಪಾಯವನ್ನು ಸುಧಾರಿಸಲು ʻಸಮಗ್ರ ಮಳೆಯಾಶ್ರಿತ ಕೃಷಿ ನೀತಿʼಯನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋ‍ಷಿಸಿದರು.

ಕೃಷಿ ಬೆಳೆಗಳಲ್ಲಿ ನೀರನ್ನು ಸಮರ್ಥ ಬಳಕೆ ಮಾಡಿ, ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್...