ಭಾರತ, ಮಾರ್ಚ್ 7 -- Karnataka Budget 2025: ಕರ್ನಾಟಕ ಬಜೆಟ್ 2025ರಲ್ಲಿ ಶಾಲಾ ಶಿಕ್ಷಣಕ್ಕೆ ಸಂಬಂಧಿಸಿ ಹಲವು ಮಹತ್ವದ ತೀರ್ಮಾನಗಳನ್ನು ಸರ್ಕಾರ ಪ್ರಕಟಿಸಿದೆ. ವಿಶೇಷವಾಗಿ ಗೌರವ ಧನ ಹೆಚ್ಚಿಸುವ ವಿಷಯ ಪ್ರಸ್ತಾಪವಾಗಿದೆ. ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ರೂ ಹೆಚ್ಚಳ ಮಾಡುವುದಾಗಿ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಸಿಯೂಟ ಸಿಬ್ಬಂದಿಗೆ 1000 ರೂ ಏರಿಕೆ ಮಾಡುವುದಾಗಿ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. ಇದಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್‌ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಒದಗಿಸುವುದಾಗಿ ಪ್ರಕಟಿಸಿದ್ದಾರೆ.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿ...