Bengaluru, ಮಾರ್ಚ್ 7 -- Karnataka Budget 2025: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ಕ್ಷೇತ್ರದ ಗುಣಮಟ್ಟ ಸುಧಾರಣೆಯ ವಿಚಾರವನ್ನೂ ತಮ್ಮ ಬಜೆಟ್ ಭಾಷಣದಲ್ಲಿ ಪ್ರಸ್ತಾಪಿಸಿದರು. ಕರ್ನಾಟಕ ಬಜೆಟ್‌ 2025-26ರಲ್ಲಿ ಎಲ್‌ಕೆಜಿಯಿಂದ ತೀಯ ಪಿಯು ತನಕ ಕಲಿಕಾ ಮಟ್ಟ ಸುಧಾರಣೆಗೆ 9 ಅಂಶಗಳ ಸೂತ್ರಗಳನ್ನು ಅವರು ಪ್ರಕಟಿಸಿದ್ದಾರೆ.

ಎಲ್‌ಕೆಜಿಯಿಂದ ದ್ವಿತೀಯ ಪಿ.ಯು.ಸಿ ವರೆಗಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ ಮೂರು ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಈ ಮೂಲಕ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರಲಾಗುವುದು. ಇದಕ್ಕಾಗಿ, ಈ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Published by HT Digital Content Services with permission from HT Kannada....