ಭಾರತ, ಮಾರ್ಚ್ 7 -- Karnataka Budget 2025: ಪಶುಸಂಗೋಪನೆ ಮಾಡುತ್ತಿರುವ ರೈತರು, ರೇಷ್ಮೆ ಬೆಳೆಗಾರರು, ಹಾಗೂ ಮೀನುಗಾರರಿಗೂ ಈ ಸಲದ ಬಜೆಟ್‌ನಲ್ಲಿ ಕೆಲವು ಕೊಡುಗೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಶೇಷವಾಗಿ ಜಾನುವಾರುಗಳ ಆಕಸ್ಮಿಕ ಸಾವಿನ ವೇಳೆ ರೈತರ ಸಂಕಷ್ಟಕ್ಕೆ ಅನುಗ್ರಹ ಯೋಜನೆ ಜಾರಿಗೊಳಿಸುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು. ಇದಲ್ಲದೆ, ಮೈಸೂರಿನಲ್ಲಿ ರೇಷ್ಮೆಗೂಡಿನ ಮಾರುಕಟ್ಟೆ ಸ್ಥಾಪನೆ, ಹೈ-ಟೆಕ್ ಮತ್ಸ್ಯದರ್ಶಿನಿ ಸ್ಥಾಪಿಸುವುದಾಗಿ ಹೇಳಿದರು.
ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗಾಗಿ "ಅನುಗ್ರಹ" ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10,000 ರೂಪಾಯಿಯಿಂದ 15,000 ರೂಪಾಯಿಗೆ; ಕುರಿ/ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 5,000 ರೂಪಾಯಿಯಿಂದ 7,500 ರೂಪಾಯಿಗೆ ಹಾಗೂ 3-6 ತಿಂಗಳ ಕುರಿ/ಮೇಕೆ ಮರಿಗಳಿಗೆ ನೀಡಲಾಗುತ್ತಿರ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.