ಭಾರತ, ಮಾರ್ಚ್ 7 -- Karnataka Budget 2025: ನಾಡ ದೊರೆ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 7, ಶುಕ್ರವಾರ) ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸಿರುವ 2025-26ನೇ ಸಾಲಿನ ಆಯವ್ಯಯ ಬಗ್ಗೆ ಕೆಲವು ನಾಯಕರು ಪ್ರತಿಕ್ರಿಯಿಸಿದ್ದಾರೆ. ಅದರಲ್ಲೂ ಬಿಜೆಪಿಯ ಕೆಲವು ಶಾಸಕರು ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರೆ, ಶಾಸಕ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಯಾರು ಏನು ಹೇಳಿದ್ದಾರೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

ವಿಧಾನಸಭಾ ಕಲಾಪದ ಹೊರಗಡೆ ಮಾಧ್ಯಮದವರೊಂದಿಗೆ ಮಾತನಾಡಿರುವ ಬಿಜೆಪಿ ಶಾಸಕರ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಮುಸ್ಲೀಮರಿಗೆ ಮೀಸಲಾತಿ ನೀಡಿರುವುದು ದುರ್ದೈವ. ಧರ್ಮಾಧಾರಿತ ಯಾವುದೇ ಮೀಸಲಾತಿ ಇಲ್ಲ. ಆದರೆ ಇವರು ಕೊಟ್ಟಿದ್ದಾರೆ. ಈ ಸಂಬಂಧ ನಾವು ಪ್ರತಿಭಟನೆ ಮಾಡುತ್ತೇವೆ. ಜೊತೆಗೆ ಕೋರ್ಟ್ ನಲ್ಲಿ ಪ್ರಶ್ನೆ ಮಾಡುತ್ತೇವೆ. ನಾವು ಇದನ್ನು ಸಿದ್ದರಾಮಯ್ಯ ಅವರ ಕೊನೆಯ ಬಜೆಟ್ ಅನ್ನೋದಿಲ್ಲ, ಅದಷ್ಟು ಬೇಗ...