ಭಾರತ, ಮಾರ್ಚ್ 6 -- Karnataka Budget 2025 Live: ಕರ್ನಾಟಕ ಬಜೆಟ್ 2025-26ರ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾರ್ಚ್ 7) ಕರ್ನಾಟಕ ಬಜೆಟ್ 2025 ಮಂಡಿಸಲಿದ್ದು, ಅದಕ್ಕೆ ಬೇಕಾದ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ. ಮಂಡಿ ನೋವು ಕಾಡುತ್ತಿರುವ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಕುಳಿತುಕೊಂಡೇ ಬಜೆಟ್ ಭಾಷಣ ಮಾಡುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ಅವರು ಈ ಸಲದ ಬಜೆಟ್‌ನಲ್ಲಿ ಅಭಿವೃದ್ಧಿ ಮತ್ತು ಸಾಮಾಜಿಕ ಕಲ್ಯಾಣ ಯೋಜನೆಗಳ ನಡುವೆ ಸಮತೋಲನ ಕಂಡುಕೊಳ್ಳಬೇಕಾಗಿರುವುದು ದೊಡ್ಡ ಸವಾಲು. ಒಂದು ಕಡೆ, ಗೃಹಲಕ್ಷ್ಮಿ, ಯುವನಿಧಿ, ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹ ಜ್ಯೋತಿ ಸೇರಿ ಐದು ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ಹಂಚಿಕೆ ಮಾಡುವುದು ಹಾಗೂ ಇನ್ನೊಂದೆಡೆ, ಮೂಲಸೌಕರ್ಯ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಸಾಲ ಪಡೆಯುವ ಅನಿವಾರ್ಯ ಕಂಡುಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ 2025-26 ಮಂಡಿಸುವುದು ಎಷ್ಟು ಗಂಟೆ, ಅವರ ಬಜ...