ಭಾರತ, ಫೆಬ್ರವರಿ 26 -- ವಿಜಯನಗರ: ಕರ್ನಾಟಕ ಬಜೆಟ್ 2025-26ರಲ್ಲಿ ಸಾಮೂಹಿಕ ವಿವಾಹಕ್ಕೆ ಉತ್ತೇಜನ ನೀಡುವ ಘೋಷಣೆ ಪ್ರಕಟವಾಗಲಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಮಂಗಳವಾರ (ಫೆ 25) ಹೇಳಿದರು. ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಎಲ್ಲ ಜಾತಿ, ಜನಾಂಗ ಮತ್ತು ಧರ್ಮಗಳ ಬಡವರು ಮದುವೆ ಆದರೆ, ಅಂಥವರಿಗೆ 50 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡುವ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ. ಅವರು ಅದನ್ನು ಈ ಸಲದ ಬಜೆಟ್‌ನಲ್ಲಿ ಘೋ‍ಷಿಸುವುದಾಗಿ ಸಮ್ಮತಿಸಿದ್ದಾರೆ ಎಂದು ಜಮೀರ್ ಅಹ್ಮದ್ ಹೇಳಿದರು.

ಹಗರಿಬೊಮ್ಮನಹಳ್ಳಿ ತಾಲೂಕು ಬಂಡಿಹಳ್ಳಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಸಚಿವ ಜಮೀರ್ ಅಹ್ಮದ್‌, 'ಸಿರಾಜ್ ಶೇಖ್ ಅವರ ಪುತ್ರನ ವಿವಾಹ ಸಂದರ್ಭದಲ್ಲಿ ಸರ್ವಧರ್ಮಗಳ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿತ್ತು. ಅದಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೆ ಈ ಕುರಿತು ಚರ್ಚಿಸಲಾಗಿದೆ. ಈ ಯೋಜನೆ ಜಾರಿಯಾದರೆ ಎಲ್ಲ ಜಾತಿಯ ಬಡ ಕುಟುಂಬಗಳಿಗೆ ಅನುಕೂಲ...