ಭಾರತ, ಫೆಬ್ರವರಿ 18 -- Nandini milk prices: ಕರ್ನಾಟಕ ಬಜೆಟ್ 2025 ಮಂಡಿಸುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧತೆ ನಡೆಸಿದ್ದಾರೆ. ಮಾರ್ಚ್ 7 ರಂದು ಬಜೆಟ್ ಮಂಡನೆಯಾಗಲಿದ್ದು, ಅದಾದ ಬಳಿಕ ಹಾಲಿನ ದರ ಪ್ರತಿ ಲೀಟರ್‌ಗೆ 5 ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈಗಾಗಲೇ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ದರ ಹೆಚ್ಚಳ, ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆಯ ಬರೆ ಕಾಯುತ್ತಿರುವ ಸಂದರ್ಭದಲ್ಲೇ ಹಾಲಿನ ದರ ಏರಿಕೆ ವಿಚಾರ ಗಮನಸೆಳೆದಿದೆ. ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ಹಾಲಿನ ದರ ಲೀಟರ್‌ಗೆ 5 ರೂಪಾಯಿ ಏರಿಸುವುದಕ್ಕೆ ಸಿದ್ಧತೆ ನಡೆಸಿದೆ ಎಂದು ಕೆಎಂಎಫ್ ಮೂಲಗಳು ತಿಳಿಸಿವೆ.

ಕಳೆದ ತಿಂಗಳು ರಾಜ್ಯದ ಎಲ್ಲಾ 16 ಹಾಲು ಒಕ್ಕೂಟಗಳ ಅಧ್ಯಕ್ಷರು, ನಿರ್ದೇಶಕರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೆಎಂಎಫ್‌ ಪ್ರತಿನಿಧಿಗಳೊಂದಿಗೆ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ಸಭೆ ನಡೆಸಿದ್ದರು. ಆ ಸಭೆಯಲ್ಲಿ ಹಾಲಿನ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ ಕುರಿತು ಚರ್...