ಭಾರತ, ಫೆಬ್ರವರಿ 12 -- Karnataka Micro Finance Ordinance 2025: ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಸರ್ಕಾರ ರಾಜಭವನಕ್ಕೆ ಕಳುಹಿಸಿದ್ದ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸಂಬಂಧಿಸಿದ ಕರ್ನಾಟಕ ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ 2025ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿವರಣೆ ಕೋರಿ ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ಸಂಬಂಧಿಸಿದ ಸುಗ್ರೀವಾಜ್ಞೆಯನ್ನು ಕಳೆದ ವಾರ ವಾಪಸ್ ಕಳುಹಿಸಿದ್ದರು. ಬಳಿಕ ರಾಜ್ಯ ಸರ್ಕಾರ ಆ ವಿವರಣೆಗಳೊಂದಿಗೆ ಸುಗ್ರೀವಾಜ್ಞೆಯನ್ನು ಮತ್ತೆ ರಾಜಭವನಕ್ಕೆ ಕಳುಹಿಸುತ್ತಿ. ಇದೀಗ, ಆ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ.

ಮೈಕ್ರೋ ಫೈನಾನ್ಸ್ ಕಂಪನಿಗಳು, ಲೇವಾದೇವಿದಾರರು, ಖಾಸಗಿ ವ್ಯಕ್ತಿಗಳು ಸಾಲಗಾರರಿಂದ ಬಲವಂತದ ಸಾಲ ವಸೂಲಿ ಮತ್ತು ಸಾಲ ಪಡೆದವರಿಗೆ ಕಿರುಕುಳ ತಪ್ಪಿಸುವ ಉದ್ದೇಶದಿಂದ ರೂಪಿಸಿದ 'ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಒತ್ತಡ ತಂತ...