Bangalore, ಏಪ್ರಿಲ್ 17 -- ಬೆಂಗಳೂರು: ಕೊನೆ ಕ್ಷಣದಲ್ಲಿ ಬಂದು ಸಿಇಟಿ ಪರೀಕ್ಷೆ ಬರೆಯಲು ಪ್ರಯತ್ನಿಸಿದ ಅಭ್ಯರ್ಥಿಯೊಬ್ಬರು ನಕಲಿ ಎಂಬುದನ್ನು ಕ್ಯೂಆರ್ ಕೋಡ್ ಆಧಾರಿತ ಮುಖ ಚಹರೆ ಪತ್ತೆಹಚ್ಚುವ ಆ್ಯಪ್ ಗುರುತಿಸಿದ್ದು, ಈ ಕುರಿತು ತನಿಖೆಗೆ ಆದೇಶಿಸಲಾಗಿದೆ.ಮಲ್ಲೇಶ್ವರದ 7ನೇ ಅಡ್ಡರಸ್ತೆಯ ಸಿಲ್ವರ್ ವ್ಯಾಲಿ ಪಬ್ಲಿಕ್ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ.ತುಬಾ ಫಾತೀಮಾ ಜಮೀಲ್ ಎಂಬಾಕೆ ಇಂದು ಬೆಳಿಗ್ಗೆ ಗಣಿತ ವಿಷಯ ಬರೆಯಲು ಬಂದವರು ನೇರವಾಗಿ ಶೌಚ ಗೃಹಕ್ಕೆ ಹೋಗಿ ಗಂಟೆಯಾದರೂ ಹೊರ ಬಂದಿರಲಿಲ್ಲ. ಇನ್ನೇನು ಪರೀಕ್ಷೆ ಆರಂಭವಾಗಬೇಕು ಎನ್ನುವಷ್ಟರಲ್ಲಿ ಹೊರ ಬಂದು ಕ್ಯೂಆರ್ ಕೋಡ್ ಇರುವ ಪ್ರವೇಶ ಪತ್ರ ತೋರಿಸಿ, ಒಳ ಹೋಗಲು ಪ್ರಯತ್ನಿಸಿದರು. ಆ ಸಂದರ್ಭದಲ್ಲಿ ಮುಖ ಚಹರೆ ಪತ್ತೆ ಆ್ಯಪ್ ಮೂಲಕ ಅವರ ಭಾವಚಿತ್ರ ತೆಗೆದಾಗ ಅವರು ನಕಲಿ ಎಂಬುದು ಗೊತ್ತಾಗಿದೆ. ತಕ್ಷಣ ಈ ವಿಷಯವನ್ನು ಪ್ರಾಂಶುಪಾಲರ ಗಮನಕ್ಕೆ ತರಬೇಕೆನ್ನುವಷ್ಟರಲ್ಲಿ ಅಲ್ಲಿಂದ ಅವರು ಕಾಲ್ಕಿತ್ತಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.