ಭಾರತ, ಫೆಬ್ರವರಿ 21 -- ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಕ್ಕೆ ವಿಶ್ವವಿದ್ಯಾಲಯಗಳ ಪೂರ್ಣ ಅಧಿಕಾರ ನೀಡುವಂತಹ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮಸೂದೆ-2025 ಮಂಡನೆಗೆ ಸಿದ್ದವಾಗಿದ್ದು, ಈ ಸಲದ ಬಜೆಟ್ ಅಧಿವೇಶನದಲ್ಲೇ ಮಂಡನೆಯಾಗುವ ಸಾಧ್ಯತೆ ಇದೆ. ಈ ಮಸೂದೆ ಮಂಡನೆಯಾಗಿ ಅಂಗೀಕಾರವಾದರೆ, ಆ ನಂತರದಲ್ಲಿ ರಾಜ್ಯಪಾಲರ ಪಾತ್ರ ವಿಶ್ವ ವಿದ್ಯಾಲಯಗಳ ಘಟಿಕೋತ್ಸವಕ್ಕೆ ಮಾತ್ರ ಸೀಮಿತವಾಗುವ ಸಾಧ್ಯತೆ ಇದೆ. ಮಾರ್ಚ್ 3 ರಿಂದ ಕರ್ನಾಟಕ ಬಜೆಟ್ ಅಧಿವೇಶನ ಶುರುವಾಗಲಿದ್ದು, ಮಾರ್ಚ್‌ 21ರ ತನಕ ನಡೆಯಲಿದೆ.

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ-2000 ದ ಪ್ರಕಾರ, ಕರ್ನಾಟಕ ಸರ್ಕಾರವೇ ಕುಲಪತಿ ನೇಮಕಾತಿಗೆ ಮೂವರು ಸದಸ್ಯರನ್ನು ಒಳಗೊಂಡ ಶೋಧನಾ ಸಮಿತಿಯನ್ನು ರಚಿಸುತ್ತಿತ್ತು. ಸಮಿತಿಯ ಸದಸ್ಯರ ಪೈಕಿ ಒಬ್ಬರನ್ನು ಶಿಫಾರಸು ಮಾಡುವ ಅಧಿಕಾರ ರಾಜ್ಯಪಾಲರದ್ದಾಗಿತ್ತು. ರಾಜ್ಯಪಾಲರು ವಿಶ್ವವಿದ್ಯಾಲಯಗಳ ಕುಲಾಧಿಪತಿಗಳೂ ಆಗಿರುವ ಕಾರಣ ಅವರಿಗೆ ಈ ಅಧಿಕಾರ ನೀಡಲಾಗಿತ್ತು. ಆಯಾ ವಿಶ್ವವಿದ್ಯಾಲಯದ ಸಿಂಡಿಕೇಟ್, ವಿಶ್ವ ವಿದ್ಯಾಲಯ ಅನು...