Bengaluru, ಏಪ್ರಿಲ್ 15 -- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿ ಕಾವೇರಿಯಲ್ಲಿ ಇಂದು ಸಂಜೆ ಮುಷ್ಕರ ನಿರತ ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಲಾರಿ ಮಾಲೀಕರ ಸಂಘದ ಅ‍ಧ್ಯಕ್ಷ ಷಣ್ಮುಖಪ್ಪ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಲಾರಿ ಮತ್ತು ಟ್ರಕ್ ಮಾಲೀಕ ಸಂಘಟನೆಗಳ ಮುಖಂಡರ ಜೊತೆ ಸಭೆ ನಡೆಸಿ ಅವರ ಬೇಡಿಕೆಗಳ ಬಗ್ಗೆ ಚರ್ಚಿಸಿದರು.

ಈ ಬಾರಿ ಕರ್ನಾಟಕ ಬಜೆಟ್‌ನಲ್ಲಿ ಡಿಸೇಲ್ ಮೇಲಿನ ಸುಂಕ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.

ಲಾರಿ ಮಾಲೀಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸರ್ಕಾರ ಬಡವರ ಪರವಾಗಿದ್ದು ಸರ್ಕಾರದೊಂದಿಗೆ ಲಾರಿ ಮಾಲಿಕರು ಸಹಕರಿಸಬೇಕು ಎಂದು ಮುಖ್ಯಮಂತ...