ಭಾರತ, ಏಪ್ರಿಲ್ 29 -- ಬೆಂಗಳೂರು: ಇದೇ ಏಪ್ರಿಲ್ 18 ಮತ್ತು 19ರಂದು ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಉತ್ತರ ಪತ್ರಿಕೆಗಳಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಹೊರತುಪಡಿಸಿ ಪಠ್ಯದ ಪ್ರಶ್ನೆಗಳನ್ನು ಮಾತ್ರ ಮೌಲ್ಯ ಮಾಪನ ಮಾಡಲು ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಮರು ಪರೀಕ್ಷೆ ನಡೆಸದಿರಲು ನಿರ್ಧರಿಸಿದೆ. ಇದರಿಂದ ವಿದ್ಯಾರ್ಥಿಗಳಿಗೆ ನೆಮ್ಮದಿ ಸಿಕ್ಕಂತಾಗಿದೆ.

ಭೌತಶಾಸ್ತ್ರ ವಿಷಯದಲ್ಲಿ 9 ಪ್ರಶ್ನೆಗಳು ರಸಾಯನ ಶಾಸ್ತ್ರ ವಿಷಯದಲ್ಲಿ 15 ಪ್ರಶ್ನೆಗಳು ಗಣಿತ ವಿಷಯದಲ್ಲಿ 15 ಪ್ರಶ್ನೆಗಳು ಮತ್ತು ಜೀವಶಾಸ್ತ್ರ ವಿಷಯದಲ್ಲಿ 11 ಪ್ರಶ್ನೆಗಳನ್ನು ಹೊರತುಪಡಿಸಿ ಮೌಲ್ಯಮಾಪನ ನಡೆಯಲಿದೆ.

2023-24 ನೇ ಸಾಲಿನಲ್ಲಿ ನಡೆದ ಸಿಇಟಿ ಪ್ರಶ್ನೆ ಪತ್ರಿಕೆಯಲ್ಲಿ 50 ಪ್ರಶ್ನೆಗಳು ಸಿಲೆಬಸ್ ಹೊರತಾಗಿ ಇದೆ ಎಂದು ತಜ್ಞರ ಸಮಿತಿ ವರದಿಯಲ್ಲಿ ತಿಳಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಮತ್ತೆ ಮರು ಪರೀಕ್ಷೆ ಮಾಡುವ ಬದಲು ಆ ಪ್ರಶ್ನೆಗಳನ್ನು ಹೊರತು ಪಡ...