Bangalore, ಮೇ 24 -- ಬೆಂಗಳೂರು: ಸರಿಯಾಗಿ ನೋಂದಣಿ ಸಂಖ್ಯೆಯನ್ನು ನಮೂದಿಸದ ಕಾರಣದಿಂದ ಸಿಇಟಿ-2025ರ ಫಲಿತಾಂಶ ಪ್ರಕಟವಾಗದೇ ಇರುವ ಅಭ್ಯರ್ಥಿಗಳಿಗೆ ತಮ್ಮ ಅಂಕಗಳನ್ನು ದಾಖಲಿಸಲು ಅವಕಾಶ ನೀಡುವ ಸಲುವಾಗಿ ಮೇ 26ರಿಂದ ಆನ್ ಲೈನ್ ಲಿಂಕ್ ತೆರೆಯಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.ಸಿಇಟಿ-2025ರ ಫಲಿತಾಂಶವನ್ನು ಕೆಇಎ ಶನಿವಾರ ಪ್ರಕಟಿಸಿದ್ದು, ಕೆಲವು ಅಭ್ಯರ್ಥಿಗಳು ಹಿಂದಿನ ವರ್ಷದಲ್ಲಿ 2ನೇ ಪಿಯು / 12ನೇ ತರಗತಿ ಪರೀಕ್ಷೆಗಳಲ್ಲಿ ತಾವು ತೇರ್ಗಡೆಯಾಗಿದ್ದರೂ ಫಲಿತಾಂಶ ಪ್ರಕಟವಾಗಿಲ್ಲ ಎಂದು ಮನವಿಗಳನ್ನು ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಶನಿವಾರ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಸಿಇಟಿ-2025ರ ಫಲಿತಾಂಶವನ್ನು ಪ್ರಕಟಿಸುವ ಮೊದಲು 2ನೇ ಪಿಯು / 12ನೇ ತರಗತಿ ಅಂಕಗಳನ್ನು ಆಯಾ ಮಂಡಳಿಗಳಿಂದಲೇ ಪಡೆಯಲಾಗುವುದು ಎಂದು ಸೂಚಿಸಲಾಗಿತ್ತು ಮತ್ತು ಅಭ್ಯರ್ಥಿಗಳು ಸರಿಯಾದ ನೋಂದಣಿ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯ ಎಂದು ಸೂಚಿಸಲಾಗಿತ್ತ...