ಭಾರತ, ಮೇ 1 -- ಕರ್ನಾಟಕ ಸಿಇಟಿ 2025ರ ಫಲಿತಾಂಶ: ಕರ್ನಾಟಕದಲ್ಲಿ ಎಂಜಿನಿಯರಿಂಗ್, ಮೆಡಿಕಲ್ ಸೇರಿ ವಿವಿಧ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಒದಗಿಸುವ ಕರ್ನಾಟಕ ಸಿಇಟಿ 2025ರ ಫಲಿತಾಂಶ ಯಾವಾಗ ಬರಬಹುದು ಎಂಬ ನಿರೀಕ್ಷೆಯಲ್ಲಿದ್ಧಾರೆ ಪರೀಕ್ಷಾರ್ಥಿಗಳು. ಕರ್ನಾಟಕ ಸಿಇಟಿ ಏಪ್ರಿಲ್ 16 ಮತ್ತು ಏಪ್ರಿಲ್ 17 ರಂದು ಕರ್ನಾಟಕದ 775 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು. ಈ ಪರೀಕ್ಷೆಗೆ 3.31 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಈ ಎರಡು ಪರೀಕ್ಷೆಗಳಿಗೆ ಪೂರ್ವಭಾವಿಯಾಗಿ ಏಪ್ರಿಲ್ 15 ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ನಡೆಯಿತು. ವೆಬ್‌ಕಾಸ್ಟಿಂಗ್ ನಿಗಾದಲ್ಲಿ ಏ.16 ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಹಾಗೂ ಏ.17ರಂದು ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಪರೀಕ್ಷೆಗಳು ನಡೆದವು.

ಕರ್ನಾಟಕ ಸಿಇಟಿ 2025ರ ಫಲಿತಾಂಶ ಯಾವಾಗ ಪ್ರಕಟವಾಗಬಹುದು ಎಂದು ಚಾತಕ ಪ...