ಭಾರತ, ಏಪ್ರಿಲ್ 23 -- ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು, ಇಂದು (ಏಪ್ರಿಲ್ 23, ಬುಧವಾರ) ಕೂಡ ಮಳೆಯಾಗುವ ಮುನ್ಸೂಚನೆ ಇದೆ. ಸತತ ಮಳೆಯಾಗಿದ್ದಾಗಿ ಬಿಸಿ ಕೂಡ ಕಡಿಮೆಯಾಗುತ್ತಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ. ನಿನ್ನೆ (ಏಪ್ರಿಲ್ 22, ಮಂಗಳವಾರ) ಎಲ್ಲೆಲ್ಲಿ ಮಳೆಯಾಗಿತ್ತು ಹಾಗೂ ಇಂದು ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

ಏಪ್ರಿಲ್ 22ರ ಮಂಗಳವಾರ ರಾಜ್ಯದ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ 3 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ತುಮಕೂರು ಜಿಲ್ಲೆಯ ತಿಪಟೂರು 2, ದಕ್ಷಿಣ ಜಿಲ್ಲೆಯ ಬೆಳ್ತಂಗಡಿ, ಯಾದಗಿರಿ ಜಿಲ್ಲೆಯ ಕೆಂಭಾವಿ, ಧಾರವಾಡ ಹಾಗೂ ಕಲಬುರ್ಗಿ ಜಿಲ್ಲೆಯ ಯಡ್ರಾಮಿಯಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ. ಮಳೆಯಾಗುತ್ತಿರುವ ಪ್ರದೇಶಗಳಲ್ಲಿ ಬಿಸಿಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಉಳಿದಂತೆ ರಾಜ್ಯಾದ್ಯಂತ ಒಣಹವೆ ಮುಂದುವರಿದಿದೆ. ರಾಜ್ಯದಲ್ಲಿ ಅತಿ ಹೆಚ್ಚು ಉಷ್ಣಾಂಶ 41.8 ಡಿಗ್ರಿ ಸೆಲ್ಸಿಯಸ್ ಕಲಬರ್ಗಿಯಲ್...