ಭಾರತ, ಮಾರ್ಚ್ 25 -- ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಭೂಮಿಯನ್ನು ಕೊಂಚ ತಣ್ಣಗಾಗಿಸಿದೆ. ಇಂದು ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ವರದಿ ತಿಳಿಸಿದೆ.

ಮಳೆ ಸುರಿದಿದ್ದರೂ ಸೆಕೆಯ ಪ್ರಮಾಣ ಕೊಂಚವೂ ತಗ್ಗಿಲ್ಲ. ಮಳೆ ಬಂದ ಸಮಯದಲ್ಲಿ ಕೊಂಚ ತಣ್ಣಗಾಗುವ ಇಳೆ ಕ್ಷಣ ಮಾತ್ರದಲ್ಲಿ ಮತ್ತೆ ಬಿಸಿ ಏರಿಸಿಕೊಳ್ಳುತ್ತಿದೆ. ಇನ್ನೂ ಕೆಲವು ದಿನಗಳ ಕಾಲ ಮಳೆ ಬರಬಹುದು ಎನ್ನುವ ನಿರೀಕ್ಷೆ ಇರಿಸಿಕೊಂಡಿದ್ದರೆ ನಿಮಗೆ ನಿರಾಸೆ ಕಾಡುವುದು ಖಚಿತ. ಯಾಕೆಂದರೆ ಇನ್ನೆರಡು ದಿನಗಳ ನಂತರ ಮಳೆ ನಿಂತು ಹೋಗಲಿದ್ದು, ಮತ್ತೆ ಬಿಸಿಲಿನ ತಾಪ ಏರಿಕೆಯಾಗಲಿದೆ. ಗರಿಷ್ಠ ತಾಪದಲ್ಲಿ ಯಾವುದೇ ಬದಲಾವಣೆ ಆಗದೇ ಇದ್ದರೂ, ಕನಿಷ್ಠ ತಾಪದಲ್ಲಿ ಏರಿಕೆಯಾಗುವ ಮುನ್ಸೂಚನೆ ಇದೆ. ಹಾಗಾದರೆ ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಬರುತ್ತೆ, ಎಲ್ಲೆ...