ಭಾರತ, ಏಪ್ರಿಲ್ 25 -- ಕರ್ನಾಟಕ ಹವಾಮಾನ: ಬೆಳಗಾವಿ ಜಿಲ್ಲೆಯ ಕೆಲವು ಕಡೆ ಇಂದು (ಎಪ್ರಿಲ್ 25) ಕೆಲವೇ ಗಂಟೆಗಳ ಒಳಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಆಧರಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. ಈಗಾಗಲೇ ಮೈಸೂರು, ಹಾಸನ ಸೇರಿ 10 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು. ಕೆಲವು ಕಡೆ ಗುಡುಗು, ಬಿರುಗಾಳಿ ಸಹಿತ ಮಳೆಯಾಗಬಹುದು ಎಂದೂ ಮುನ್ನೆಚ್ಚರಿಕೆಯನ್ನೂ ಇಲಾಖೆ ನೀಡಿದೆ. ಇಂದು ಯಾವೆಲ್ಲ ಜಿಲ್ಲೆಗಳಲ್ಲಿ ಮಳೆಯಾಗಬಹುದು ನೋಡೋಣ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಇಂದು (ಏಪ್ರಿಲ್ 25) ಬೆಳಿಗ್ಗೆ 8 ಗಂಟೆಗೆ ನೀಡಿದ ಮಾಹಿತಿ ಪ್ರಕಾರ, ಇನ್ನು ಮೂರು ಗಂಟೆಗಳ ಒಳಗೆ ಬೆಳಗಾವಿಯ ಕೆಲವು ಕಡೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಬಹುದು. ಅಂದರೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರ ನೀಡಿರುವ ಮಾಹಿತಿ ಆಧರಿಸಿ, "ಮುಂದಿನ 3 ಗಂಟೆಗಳಲ್ಲಿ ಬೆಳಗಾವಿ ಜಿಲ...