ಭಾರತ, ಜನವರಿ 31 -- ಬೆಂಗಳೂರು: ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಕುಸಿಯುತ್ತಿದೆ. ಬೆಳಿಗ್ಗೆ ಮತ್ತು ಥಂಡಿ ಪ್ರಮಾಣವೂ ಗಣನೀಯವಾಗಿ ಇಳಿಕೆಯಾಗುತ್ತಿದೆ. ಬೇಸಿಗೆ ಸಮೀಪಿಸುತ್ತಿರುವ ಈ ಅವಧಿಯಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದಲೇ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಫೆಬ್ರವರಿ 1ರಂದು ವರುಣ ಆರ್ಭಟ ನಡೆಸಲಿದ್ದಾನೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಫೆ 1ರ ಶನಿವಾರ ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ತುಮಕೂರು, ಶಿವಮೊಗ್ಗ, ಕೊಡಗು, ವಿಜಯನಗರ, ಚಿಕ್ಕಮಗಳೂರು, ಯಾದಗಿರಿ, ಬಳ್ಳಾರಿ, ಧಾರವಾಡ, ಬೀದರ್, ಬೆಳಗಾವಿ ಸೇರಿದಂತೆ ಉತ್ತರ ಒಳನಾಡು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ ಉಳಿದ ಜಿಲ್ಲೆಗಳ...