ಭಾರತ, ಏಪ್ರಿಲ್ 20 -- ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದು (ಏಪ್ರಿಲ್ 20, ಭಾನುವಾರ) ಕೂಡ ಮಳೆಯಾಗುವ ಮುನ್ಸೂಚನೆ ಇದೆ. ಅಕಾಲಿಕ ಮಳೆ ಕೆಲವೆಡೆ ಜನ ಜೀವನದ ಮೇಲೆ ಪರಿಣಾಮ ಬೀರಿದೆ. ಅಲ್ಲದೆ ವಾಹನ ಸಂಚಾರಕ್ಕೂ ಅಡ್ಡಿಯುಂಟು ಮಾಡಿತು. ನಿನ್ನೆ ಕರ್ನಾಟಕದ ಎಲ್ಲೆಲ್ಲಿ ಮಳೆಯಾಗಿದೆ ಹಾಗೂ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ಇದೆ ಎಂಬುದರ ವರದಿಯನ್ನು ಇಲ್ಲಿ ನೀಡಲಾಗಿದೆ.

ಏಪ್ರಿಲ್ 19ರ ಶನಿವಾರ ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಧಾರವಾಡ ಜಿಲ್ಲೆಯ ಅಣ್ಣಿಗೆರೆಯಲ್ಲಿ 7 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಬಾಗಲಕೋಟೆ ಜಿಲ್ಲೆಯ ಬಿಳಗಿಯಲ್ಲಿ 4, ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ 3, ರಾಯಚೂರು, ವಿಜಯಪುರ ಜಿಲ್ಲೆಯ ಆಲಮಟ್ಟಿ, ಚಿಕ್ಕಬಳ್ಳಾಪುರ, ವಿಜಯನಗರದ ಹರಪನಹಳ್ಳಿ, ತುಮಕೂರಿನ ಗುಬ್ಬಿ, ಕುಣಿಗಲ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ಮಂಡ್ಯ ಜಿಲ್ಲೆಯ ನಾಗಮಂಗಲ, ಬೀದರ್ ಜಿಲ್ಲೆಯ ಚಿಟಗುಪ್ಪದಲ್ಲಿ ತಲಾ 2 ಸೆಂಟಿ ಮೀಟರ್, ಕಲಬುರ್ಗ...