ಭಾರತ, ಏಪ್ರಿಲ್ 29 -- ಕರ್ನಾಟಕ ಹವಾಮಾನ: ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 29) ಅಲ್ಲಲ್ಲಿ ಮಳೆಯಾಗಬಹುದು. ಕೆಲವು ಕಡೆಗಳಲ್ಲಿ ಗುಡುಗು, ಸಿಡಿಲು ಮತ್ತು ಬೀಸುಗಾಳಿಯೊಂದಿಗೆ (ಗಂಟೆಗೆ 30 ರಿಂದ 60 ಕಿಮೀ ವೇಗದ ಗಾಳಿ) ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಎಲ್ಲೆಡೆ ಒಣಹವೆ ಮುಂದುವರಿಯಲ್ಲಿದ್ದು, ಕೆಲವು ಪ್ರದೇಶಗಳಲ್ಲಿ ತಾಪಮಾನ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ವರದಿ ತಿಳಿಸಿದೆ.
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದ ಇಂದಿನ ಹವಾಮಾನ ವಿವರ ನೀಡಿರುವ ಹವಾಮಾನ ಇಲಾಖೆ, ಭಾಗಶಃ ಮೋಡಕವಿದ ವಾತಾವರಣ ಸಾಧ್ಯತೆಯನ್ನು ಉಲ್ಲೇಖಿಸಿದೆ. ಅದೇ ರೀತಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಅಥವಾ 40 ರಿಂದ 50 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಬಹುದು. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರಗಳಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.