Bangalore, ಮೇ 17 -- ಬೆಂಗಳೂರು: ಬೆಂಗಳೂರು ನಗರದಲ್ಲಿ ಸಂಜೆಯಾಗುತ್ತಲೇ ಮೋಡಗಳ ಸಂಚಾರ ಭರಾಟೆಯೂ ಜೋರಾಗಿದೆ. ಅಷ್ಟೇ ಅಲ್ಲದೇ ಮಳೆ ಕೂಡ ಸುರಿಯುತ್ತಲಿದೆ. ರಾತ್ರಿ ವೇಳೆ ಬೆಂಗಳೂರಿನಲ್ಲಿ ಭಾರೀ ಮಳೆಯೇ ಆಗುತ್ತಿದೆ. ಈಗಾಗಲೇ ಕೆಲವು ದಿನಗಳಿಂದ ಬೆಂಗಳೂರು ಮಹಾನಗರದಲ್ಲಿ ಸುರಿಯುತ್ತಿರುವ ಮಳೆ ಶನಿವಾರವೂ ಇರಲಿದೆ. ಗುಡುಗು ಸಹಿತ ಭಾರೀ ಮಳೆ ಕೆಲವು ಭಾಗದಲ್ಲಿ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಪ್ರಾದೇಶಿಕ ಕೇಂದ್ರವು ಮುನ್ಸೂಚನೆ ನೀಡಿದೆ. ಕರ್ನಾಟಕದ 13 ಜಿಲ್ಲೆಗಳಲ್ಲಿ ಶನಿವಾರದಂದು ಭಾರೀ ಮಳೆಯಾಗಬಹುದು. ಉಳಿದಂತೆ ಕರ್ನಾಟಕದ ಕರಾವಳಿ. ಉತ್ತರ ಒಳನಾಡು, ದಕ್ಷಿಣ ಭಾಗದ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ವಾರದಲ್ಲೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.