ಭಾರತ, ಮಾರ್ಚ್ 5 -- Karnataka Weather: ಕರ್ನಾಟಕದಲ್ಲಿ ಇಂದು ಒಣಹವೆ ಮುಂದುವರಿಯಲಿದ್ದು, ಕರಾವಳಿ ಕರ್ನಾಟಕದಲ್ಲಿ ಸುಡುಬಿಸಿಲು ಹಾಗೂ ಆರ್ದ್ರ ವಾತಾವರಣ ಇರಲಿದೆ. ಇನ್ನೊಂದೆಡೆ, ಬೆಂಗಳೂರು ಸುತ್ತಮುತ್ತ ತಾಪಮಾನ ಏರಿಕೆಯಾಗಿದ್ದು, ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರವು ಹವಾಮಾನ ಮುನ್ಸೂಚನೆ ವರದಿಯಲ್ಲಿ ತಿಳಿಸಿದೆ.

ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರಗಳಲ್ಲಿ ಸುಡುಬಿಸಿಲ ಅನುಭವ ಮತ್ತೆ ಕಾಡತೊಡಗಿದೆ. ತಾಪಮಾನ ಏರಿಕೆಯಾಗಿದ್ದು, ಇಂದು (ಮಾರ್ಚ್‌ 5) ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿ ಡಾ ರಾಜವೇಲ್ ಮಣಿಕ್ಕಮ್ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ನಿನ್ನೆ (ಮಾರ್ಚ್‌ 4) ಗರಿಷ್ಠ ತಾಪಮಾನ 33.8 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಬೆಂ...