Bengaluru, ಮೇ 5 -- ಕರ್ನಾಟಕ ಹವಾಮಾನ: ಕರ್ನಾಟಕದಲ್ಲಿ ಇಂದು (ಮೇ 5) ಬೆಂಗಳೂರು, ತುಮಕೂರು, ದಕ್ಷಿಣ ಕನ್ನಡ ಸೇರಿ 14 ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಬಹುದು. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿನಲ್ಲೂ ಈ ದಿನ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ಒಣಹವೆ ಇರಲಿದ್ದು, ಎಂದು ಭಾರತೀಯ ಹವಾಮಾನ ಇಲಾಖೆಯ ಮಳೆ ಹವಾಮಾನ ವರದಿ ಹೇಳಿದೆ.
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಬಹುದು, ಕೆಲವು ಕಡೆ ಗುಡುಗು ಸಹಿತ ಗಂಟೆಗೆ 30 ರಿಂದ 40 ಕಿಮೀ ವೇಗದ ಗಾಳಿಯೊಂದಿಗೆ ಮಳೆಯಾಗಬಹುದು. ಆದಾಗ್ಯೂ ಗರಿಷ್ಥ ತಾಪಮಾನ ಇಳಿಕೆಯಾಗುವುದಿಲ್ಲ. ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ನಿನ್ನೆ (ಮೇ 4) ಬೆಂಗಳೂರು ನಗರದ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 21.7 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.