Bengaluru, ಏಪ್ರಿಲ್ 30 -- ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರು ಹವಾಮಾನ ಕೇಂದ್ರದಲ್ಲಿ ನಿನ್ನೆ (ಏಪ್ರಿಲ್ 29, ಮಂಗಳವಾರ) ಸಂಜೆಯವರಿಗೆ ದಾಖಲಾಗಿರುವ ವರದಿಯ ಪ್ರಕಾರ, ಕೊಡಗು ಜಿಲ್ಲೆಯ ನಾಪೋಕ್ಲುನಲ್ಲಿ 3 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಚಾಮರಾಜನಗರದಲ್ಲಿ 2, ಚಿಕ್ಕಮಗಳೂರಿನ ಕಳಸ, ಶೃಂಗೇರಿ, ಕೊಡಗು ಜಿಲ್ಲೆಯ ಕುಶಾಲನಗರ, ದಕ್ಷಿಣ ಕನ್ನಡ ಜಿಲ್ಲೆಯ ಮಣಿ, ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ. ಇನ್ನೂ ಮೈಸೂರಿನಲ್ಲಿ ರಾತ್ರಿ ಗುಡುಗು ಸಹಿತ ಭಾರಿ ಮಳೆಯಾಗಿದೆ.

ಮಳೆಯಾಗುತ್ತಿರುವ ಕಾರಣ ಕೆಲವೊಂದು ಕಡೆಗಳಲ್ಲಿ ಬಿಸಿಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬೀದರ್, ಚಿತ್ರದುರ್ಗ, ಧಾರವಾಡ, ಗದಗ, ಕೊಪ್ಪಳ, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಗರಿಷ್ಠ ತಾಪಮಾನದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ಒಳನಾಡಿನ ಪ್ರದೇಶಗಳ ಪೈಕಿ ವಿಜಯಪುರ, ಕಲಬುರ್ಗಿ ಹಾಗೂ ಆಗುಂಬೆಯಲ...