ಭಾರತ, ಮೇ 23 -- ಇಂದಿನ ಹವಾಮಾನ: ಕರ್ನಾಟಕದ ಬಹುಭಾಗದಲ್ಲಿ ಇಂದು ಕೂಡ ಮಳೆಯ ದಿನ. ಆದಾಗ್ಯೂ ಕೆಲವು ಪ್ರದೇಶಗಳಲ್ಲಿ ಬಿಸಿಲು ಮತ್ತು ಮಳೆ ಕಾಡಲಿದೆ. ಕರಾವಳಿ ಜಿಲ್ಲೆಯಲ್ಲಿ ಮಳೆಯ ವಾತಾವರಣ ಇದ್ದರೂ, ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಇದ್ದು, ಅಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ವಸಂತ ಮಳೆ ಬಿದ್ದಾಗ ಮೂಲಸೌಕರ್ಯ ಕೊರತೆಯ ಕಾರಣ ಭಾರಿ ತೊಂದರೆ ಉಂಟಾಗಿತ್ತು. ಹೀಗಾಗಿ ಬೆಂಗಳೂರಿಗರು ಇಂದು ಮಳೆ ಬರುತ್ತಾ, ನಾಳೆ ಮಳೆ ಇದೆಯಾ ಎಂದು ಮುನ್ಸೂಚನೆ ಗಮನಿಸುವ ಪರಿಸ್ಥಿತಿ ಉಂಟಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಇಂದು (ಮೇ 23) ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ಅಲ್ಲಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಬಹುದು. ಕೆಲವು ಪ್ರದೇಶಗಳಲ್ಲಿ 30 ರಿಂದ 40 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಬಹುದು. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.