ಭಾರತ, ಮೇ 12 -- ಕರ್ನಾಟಕ ಹವಾಮಾನ: ಮರಾಠವಾಡದಿಂದ ಮನ್ನಾರ್ ಕೊಲ್ಲಿ ತನಕ ವಾಯಭಾರ ಕುಸಿತ ಉಂಟಾಗಿರುವ ಕಾರಣ, ಕರ್ನಾಟಕ ಮತ್ತು ತಮಿಳುನಾಡಿನಾದ್ಯಂತ ಒಳನಾಡು ಪ್ರದೇಶಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೆಲವು ಕಡೆ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಅಲ್ಲಲ್ಲಿ ಗುಡುಗು ಮಿಂಚು, ಸಿಡಿಲು, ಗಾಳಿ ಸಹಿತ ಮಳೆಯಾಗಬಹುದು. ಕರ್ನಾಟಕದಲ್ಲಿ ವಿಶೇಷವಾಗಿ ಬೆಂಗಳೂರು ಸೇರಿ ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆ ಸಾಧ್ಯತೆ, ಕರಾವಳಿಯಲ್ಲಿ ಮಳೆ ತುಸು ಹೆಚ್ಚು ಇರಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಕರ್ನಾಟಕದ ಮೂವತ್ತು ಜಿಲ್ಲೆಗಳ ಇಂದಿನ ಹವಾಮಾನ ಗಮನಿಸುವುದಾದರೆ, ಬಹುತೇಕ ಮಳೆಯ ವಾತಾವರಣ. ಕರಾವಳಿ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚು ಪ್ರಮಾಣದ ಮಳೆಯಾಗಬಹುದು. ಉಳಿದಂತೆ ಎಲ್ಲ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೆಲವು ಕಡೆ ಗುಡುಗು ಮಿಂಚು, ಸಿಡಿಲು, ಗಾಳಿ ಸಹಿತ ಮಳೆಯಾಗಬಹುದು. ಇದಲ್ಲದೆ, ಉಳಿದೆಡೆ ಒಣಹವೆ ಮುಂದುವರಿಯಲಿದ್ದು, ತಾಪಮಾನ ಹೆಚ್ಚಳವಾಗು...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.