ಭಾರತ, ಏಪ್ರಿಲ್ 22 -- ಕರ್ನಾಟಕ ಹವಾಮಾನ: ಕರಾವಳಿಯ ಮೂರು ಜಿಲ್ಲೆಗಳು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 22) ಕೆಲವು ಕಡೆ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬಲವಾದ ಗಾಳಿ ಸಹಿತ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ಹೇಳಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು ಹಗಲು ಹೊತ್ತು ನೀಲಾಕಾಶ ಇರಲಿದ್ದು, ಸಂಜೆಯಾಗುತ್ತಲೇ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಬಹುದು ಎಂದು ವರದಿ ಹೇಳಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿ ಇಂದು (ಏಪ್ರಿಲ್ 22) ಹಗಲು ಹೊತ್ತು ನೀಲಾಕಾಶ ಕಾಣಲಿದೆ. ಮುಸ್ಸಂಜೆ, ರಾತ್ರಿಯಾಗುತ್ತಲೇ ಮೋಡ ಕವಿದ ವಾತಾವರಣ ಕಂಡುಬರಬಹುದು. ನಾಳೆ ಬೆಳಿಗ್ಗೆ 8.30ರ ತನಕ ಮಳೆಯಾಗುವ ಸಾಧ್ಯತೆ ಕಡಿಮೆ. ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 23 ಸೆಲ್ಶಿಯಸ್ ದಾಖಲಾಗಬಹುದು. ನಿನ್ನೆ (ಏಪ್ರಿಲ್ 21) ಬೆಂಗಳೂರು ನಗರದ ಗರಿಷ್...