ಭಾರತ, ಏಪ್ರಿಲ್ 25 -- ಕರ್ನಾಟಕ ಹವಾಮಾನ: ಕರ್ನಾಟಕದಲ್ಲಿ ಇಂದು (ಏಪ್ರಿಲ್ 25) ಮೈಸೂರು, ಹಾಸನ, ಕೊಡಗು ಸೇರಿ 10 ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಮಳೆಯಾಗಬಹುದು. ಇನ್ನು ಕರ್ನಾಟಕದ ಉತ್ತರ ಒಳನಾಡು ಪ್ರದೇಶಗಳ ಪೈಕಿ ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ ಭಾಗದಲ್ಲಿ ಸುಡುಬಿಸಿಲು ಕಾಡಲಿದೆ. ಈ ನಾಲ್ಕು ಜಿಲ್ಲೆಗಳ ಕೆಲವು ತಾಲೂಕು ವ್ಯಾಪ್ತಿಯಲ್ಲಿ ಗರಿಷ್ಠ ತಾಪಮಾನ 45 ಡಿಗ್ರಿ ಸೆಲ್ಶಿಯಸ್ ದಾಟುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್ ದಾಟಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ತಿಳಿಸಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು (ಏಪ್ರಿಲ್ 25) ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ನಿನ್ನೆ ಬೆಂಗಳೂರು ನಗರ ಭಾಗದಲ್ಲಿ ಗರಿಷ್ಠ ತಾಪಮಾನ 35.4 ಡಿಗ್ರಿ ಸೆಲ್ಶಿಯಸ್...