ಭಾರತ, ಏಪ್ರಿಲ್ 26 -- ಇಂದಿನ ಹವಾಮಾನ: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಲ್ಲಲ್ಲಿ ಇಂದು (ಏಪ್ರಿಲ್ 26) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಬಹುದು. ಬಹುತೇಕ ಮೇ 2 ರ ತನಕವೂ ಬಿಸಲು- ಮಳೆಯಾಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರ ನೀಡಿರುವ ಹವಾಮಾನ ಮುನ್ಸೂಚನೆ ವರದಿ ಹೇಳಿದೆ. ಯಾವುದಕ್ಕೂ ಕೈಯಲ್ಲೊಂದು ಛತ್ರಿ ಇರಲಿ, ಬಿಸಿಲಿಗಾದರೂ ಆಗುತ್ತೆ, ಮಳೆ ಬಂದರೂ ಕೈಹಿಡಿಯುತ್ತೆ.
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು (ಏಪ್ರಿಲ್ 26) ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಹಾಗೆಂದು ತಾಪಮಾನ ಏನೂ ಕಡಿಮೆ ಇರಲ್ಲ. ಬೇಸಿಗೆ ಆದ ಕಾರಣ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಶಿಯಸ್ ಇರಬಹುದು. ನಿನ್ನೆ ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 35.4 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 24.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.