ಭಾರತ, ಫೆಬ್ರವರಿ 24 -- Karnataka Weather Feb 24: ಕರಾವಳಿ ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಹಾಗೂ ಗರಿಷ್ಠ ತಾಪಮಾನ ಎರಡರಲ್ಲೂ ಏರಿಕೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವರದಿ ಹೇಳಿದೆ. ಕರ್ನಾಟಕದ ಮುಂದಿನ 5 ದಿನಗಳ ಕಾಲ ಕೆಲವೆಡೆ ಉಷ್ಣಾಂಶದಲ್ಲಿ 4 ರಿಂಧ 5 ಡಿಗ್ರಿ ಸೆಲ್ಶಿಯಸ್ ತನಕ ಹೆಚ್ಚಳವಾಗಬಹುದು ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನೆ ವರದಿಯಲ್ಲಿ ತಿಳಿಸಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಲವು ಕಡೆ ಇಂದು (ಫೆ 24) ಮತ್ತು ನಾಳೆ (ಫೆ 25) ಮಳೆಯಾಗುವ ಸಾಧ್ಯತೆ ಇದೆ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ಹವಾಮಾನ ಮುನ್ಸೂಚನೆ ವರದಿ ಹೇಳಿದೆ. ಉಳಿದಂತೆ ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿ ತಾಪಮಾನ ಹೆಚ್ಚಳವಾಗಲಿದೆ.

ಈಗಾಗಲೇ ರಾಜ್ಯದ ಹಲವೆಡೆ ವಾಡಿಕೆಗಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಅಧಿಕ ಉಷ...