ಭಾರತ, ಮಾರ್ಚ್ 28 -- Karnataka Weather March 28: ಕರ್ನಾಟಕದ ವಿವಿಧೆಡೆ ಇಂದಿನಿಂದ (ಮಾರ್ಚ್ 28) ಆರು ದಿನಗಳ ಕಾಲ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ದಕ್ಷಿಣ ಒಳನಾಡಿನ ಮೂರು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಮಂದುವರಿಯಲಿದೆ. ಉತ್ತರ ಒಳನಾಡಿನಲ್ಲಿ ಇಂದು ಮಳೆಯ ಲಕ್ಷಣಗಳಿಲ್ಲ. ಎಂದಿನಂತೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.
ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗಗಳಲ್ಲಿ ಇಂದು ಕನಿಷ್ಠ ತಾಪಮಾನ ಕೊಂಚ ಇಳಿಕೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನದಲ್ಲಿ ವ್ಯತ್ಯಾಸ ಇಲ್ಲ ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವರದಿ ಹೇಳಿದೆ.
ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಶಿಯಸ್ ಮತ್ತ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.