ಭಾರತ, ಮಾರ್ಚ್ 9 -- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದಾದ್ಯಂತ ಒಣಹವೆ ಮುಂದುವರಿದಿದೆ. ಯಾವುದೇ ಭಾಗದಲ್ಲಿ ಮಳೆಯಾಗಿಲ್ಲ, ಮುಂದಿನ 48 ಗಂಟೆಗಳಲ್ಲಿ ಮಳೆಯ ಮುನ್ಸೂಚನೆಯೂ ಇಲ್ಲ ಬದಲಾಗಿ ಬಿಸಿ ಹೆಚ್ಚಾಗುತ್ತಲೇ ಇದೆ. ಕಳೆದ 24 ಗಂಟೆಗಳ ಹವಾಮಾನ ವರದಿ ಪ್ರಕಾರ, ಉತ್ತರ ಒಳನಾಡು ಮತ್ತು ರಾಜ್ಯದ ಕರಾವಳಿ ಭಾಗದ ಹಲವು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ರಾಯಚೂರು, ವಿಜಯಪುರು, ಕೊಪ್ಪಳ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಜನರು ಬಿಸಿಯ ವಾತಾವರಣವನ್ನು ಎದುರಿಸುತ್ತಿದ್ದಾರೆ. ಇಂದು (ಮಾರ್ಚ್ 9, ಶನಿವಾರ) ದಕ್ಷಿಣ ಒಳನಾಡಿನಲ್ಲಿ ಮುಂಜಾನೆ ವೇಳೆಯಲ್ಲಿ ಸ್ವಲ್ಪ ಚಳಿಯ ವಾತಾವರಣವಿತ್ತು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ರಾಮನಗರ ಈ ಜಿಲ್ಲೆಗಳಲ್ಲಿ ಬೆಳಗಿನ ಸಮಯದಲ್ಲಿ ಸ್ವಲ್ಪ ಚಳಿ ಇದೆ. ಅಲ್ಲಲ್ಲಿ ಮಂಜು ಮುಕಿಸಿದೆ. ಆದರೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಏರಿಕೆಯಾಗಿದೆ.

ಕರವಾಳಿ...