ಭಾರತ, ಮಾರ್ಚ್ 17 -- Karnataka Weather March 11: ಕರ್ನಾಟಕದಲ್ಲಿ ಗರಿಷ್ಠ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಬಿಸಿಲಿನ ತಾಪದಿಂದ ಜನರು ಕಂಗೆಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ತಾಪಮಾನ ಇನ್ನಷ್ಟು ಏರಿಕೆಯಾಗುವ ಜೊತೆಗೆ ಬಿಸಿಗಾಳಿ ಬೀಸುವ ಸಾಧ್ಯತೆಯ ಹವಾಮಾನ ಇಲಾಖೆ ಎಚ್ಚರಿಸಿದೆ. ಈ ನಡುವೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಖುಷಿ ಸುದ್ದಿ ಇದೆ. ದಕ್ಷಿಣಕನ್ನಡ ಸೇರಿ ಈ ಕೆಲವು ಜಿಲ್ಲೆಗಳಲ್ಲಿ ಇಂದು (ಮಾರ್ಚ್‌ 17) ಮಳೆಯಾಗುವ ಮುನ್ಸೂಚನೆ ಇದೆ.

ಹವಾಮಾನ ಇಲಾಖೆಯ ಪ್ರಕಾರ ಕೆಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದ್ದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಪ್ರಬಲ ಗಾಳಿ ಬೀಸಲಿದೆ. ಆದರೆ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಇದರೊಂದಿಗೆ ಉತ್ತರ ಒಳನಾಡಿನಲ್ಲಿ ಬಿಸಿಗಾಳಿ ಬೀಸುವ ಮುನ್ಸೂಚನೆಯನ್ನು ನೀಡಿರುವ ಹವಾಮಾನ ಇಲಾಖೆ ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ. ಬಹುತೇಕ ಮಾರ್ಚ್‌ 18 ರಿಂದ 20ರವರೆಗೆ ಶಾಖ ತರಂಗಗಳು ಬೀಸುವ ಮುನ್ಸೂಚನೆ ಇದೆ.

ಕರಾವಳಿಯ ಬಹುತೇಕ ಕಡೆ ಈ ವರ್ಷ ಅತಿಯಾದ ಬಿಸಿಲಿನ ಝಳಕ್ಕೆ ಜನ...