ಭಾರತ, ಮಾರ್ಚ್ 18 -- Karnataka Weather March 18: ರಾಜ್ಯದಲ್ಲಿ ತಾಪಮಾನ ದಿನೇ ದಿನೇ ಏರುತ್ತಲೇ ಇದೆ. ಅತಿಯಾದ ಬಿಸಿಲಿನ ಝಳಕ್ಕೆ ಜನರು ತತ್ತರಿಸುತ್ತಿದ್ದಾರೆ. ಕೂಲ್ ಸಿಟಿ ಎಂದೇ ಖ್ಯಾತಿ ಪಡೆದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ತಾಪಮಾನ ಗರಿಷ್ಠ ಪ್ರಮಾಣಕ್ಕೆ ಏರಿಕೆಯಾಗುತ್ತಿದೆ. ಸೆಖೆ, ಬಿಸಿಲಿನಿಂದ ಕಂಗೆಟ್ಟಿರುವ ಜನತೆಗೆ ಇನ್ನೊಂದು ಕಹಿ ಸುದ್ದಿ ಇದೆ. ಅದೇನೆಂದರೆ ಇಂದಿನಿಂದ (ಮಾರ್ಚ್‌ 18) ರಾಜ್ಯದಲ್ಲಿ ಬಿಸಿ ಗಾಳಿ ಬೀಸುವ ಮುನ್ಸೂಚನೆಯನ್ನು ನೀಡಿದೆ ಭಾರತೀಯ ಹವಾಮಾನ ಇಲಾಖೆ.

ಉತ್ತರಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಬಿಸಿಗಾಳಿ ಬೀಸಲಿದೆ. ಇದರೊಂದಿಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ತಾಪಮಾನ ಏರಿಕೆಯಾಗಲಿದೆ. ಈಗಾಗಲೇ ಬಿಸಿಲಿನ ತಾಪ ತಡೆಯಲು ಸಾಧ್ಯವಾಗುತ್ತಿಲ್ಲ. ಇದರೊಂದಿಗೆ ಬಿಸಿಗಾಳಿ ಕೂಡ ಬೀಸಲಿದ್ದು, ಜನರಿಗೆ ಇನ್ನಷ್ಟು ಸಮಸ್ಯೆಗಳನ್ನು ತಂದ್ದೊಡ್ಡಲಿದೆ. ಇದರಿಂದ ಆರೋಗ್ಯಕ್ಕೂ ಹಾನಿಯಾಗುವ ಸಾಧ್ಯತೆ ಇರುವ ಕಾರಣ ಅವಶ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ರಾಜ್ಯದಲ್ಲೇ ಕಲಬು...