ಭಾರತ, ಮೇ 20 -- ಮಳೆ ಹವಾಮಾನ: ಕರ್ನಾಟಕದ ರಾಜಧಾನಿ ಬೆಂಗಳೂರು ಈಗಾಗಲೇ ತತ್ತರಿಸಿ ಹೋಗಿದೆ. ಕೇವಲ 24 ಗಂಟೆಗಳ ಅವಧಿಯಲ್ಲಿ 100ಕ್ಕೂ ಹೆಚ್ಚು ಎಂಎಂ ಮಳೆ ಸುರಿದು ಬೆಂಗಳೂರಿಗರಲ್ಲಿ ನಡುಕ ಹುಟ್ಟಿಸಿದೆ. ಕಳೆದ ಎಂಟು ಹತ್ತು ದಿನಗಳಿಂದ ಚದುರಿದಂತೆ ಬೀಳುತ್ತಿದ್ದ ಮಳೆ, ಕಳೆದ ಎರಡು ದಿನಗಳಲ್ಲಿ ತೀವ್ರತೆ ಹೆಚ್ಚಿಸಿಕೊಂಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಬಹುದು. ಇಂದು (ಮೇ 20) ಕರಾವಳಿ, ಮಲೆನಾಡು ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರಲ್ಲಿ ಭಾರಿ ಮಳೆ ಸಾಧ್ಯತೆ ಇದೆ ಎಂದು ಹೇಳಿದೆ.
ಬಂಗಾಳದ ಉಪ ಸಾಗರದಲ್ಲಿ ಮೇಲೆ ಸುಳಿಗಾಳಿ, ರಾಜ್ಯದ ಒಳನಾಡಿನಲ್ಲಿ ಟ್ರಫ್ ನಿರ್ಮಾಣವಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು, ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ. ಅರಬ್ಬಿ ಸಮುದ್ರದಲ್ಲಿ ಮೇ 22ರ ವೇಳೆಗೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ನಾಲ್ಕು ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಲ...
Click here to read full article from source
To read the full article or to get the complete feed from this publication, please
Contact Us.