Bengaluru,ಬೆಂಗಳೂರು, ಮೇ 8 -- ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದು (ಮೇ 8) ಕೆಲವು ಕಡೆ ಚದುರಿದಂತೆ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯನ್ನು ನಿರೀಕ್ಷಿಸಬಹುದು. ಬೆಂಗಳೂರು, ಮೈಸೂರು, ಮಂಗಳೂರು ಸೇರಿ 26 ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕೆಲವು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಹೇಳಿದೆ.

ಕರಾವಳಿ ಕರ್ನಾಟಕದಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.ಬಿಸಿ ಮತ್ತು ಆರ್ದ್ರತೆ ಇರಲಿದ್ದು, ಮಳೆ ಬೀಳುವಾಗ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಎಚ್ಚರಿಸಿದೆ. ಇದೇ ವೇಳೆ ಕರ್ನಾಟಕದ ಉತ್ತರ ಒಳನಾಡಿನಲ್ಲಿ ತಾಪಮಾನ ಕೊಂಚ ಇಳಿಕೆಯಾಗಲಿದ್ದು, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಚದುರಿದ ಮಳೆಯಾಗಲಿದೆ....