ಭಾರತ, ಫೆಬ್ರವರಿ 11 -- ಬೆಂಗಳೂರು: ಕರ್ನಾಟಕ ಹೂಡಿಕೆದಾರರ ಸಮಾವೇಶದಲ್ಲಿ ಉದ್ಯಮಸ್ನೇಹಿ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಫೆ 11) ಲೋಕಾಪರ್ಣೆ ಮಾಡಿದರು. ಕರ್ನಾಟಕದಲ್ಲಿ ಕೈಗಾರಿಕಾ ಯೋಜನೆಗಳಿಗೆ ಕ್ಷಿಪ್ರವಾಗಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಿಗಳಿಗೆ ಸಂಬಂಧಿಸಿದ 30ಕ್ಕೂ ಹೆಚ್ಚು ಇಲಾಖೆಗಳ 150ಕ್ಕೂ ಹೆಚ್ಚು ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವ ಉದ್ದೇಶದೊಂದಿಗೆ ಏಕಗವಾಕ್ಷಿ ಪೋರ್ಟಲ್ ಅನ್ನು ಪರಿಷ್ಕರಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಕರ್ನಾಟಕ ಸರ್ಕಾರದ ಎಐ ಚಾಲಿತ ಏಕಗವಾಕ್ಷಿ ಪೋರ್ಟಲ್ ಅನ್ನು ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಲಾಗಿದೆ. ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ, ನವೀಕರಣ, ತಿದ್ದುಪಡಿ, ಕುಂದುಕೊರತೆಗಳಿಗೆ ಪರಿಹಾರಗಳನ್ನು ಸರಳಗೊಳಿಸಲಾಗಿದೆ. ಹೀಗಾಗಿ, ಕ್ಷಿಪ್ರಗತಿಯಲ್ಲಿ ಹೂಡಿಕೆ ನನಸಾಗುವಂತೆ ಮಾಡಲಿದೆ. ಜತೆಗೆ ಹೂಡಿಕೆದಾರರಿಗೆ ಕೇಂದ್ರ ಸರಕಾರದ ಮಟ್ಟದಲ್ಲಿ...