New Delhi, ಮಾರ್ಚ್ 28 -- ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79 (3)(ಬಿ) ಪ್ರಕಾರ ಅನುಚಿತ ಕಂಟೆಂಟ್ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ನೋಟಿಸ್ ಜಾರಿಗೊಳಿಸಿದ್ದನ್ನು ಪ್ರಶ್ನಿಸಿ ಮೈಕ್ರೋಬ್ಲಾಗಿಂಗ್ ತಾಣ ಎಕ್ಸ್ ವಾರದ ಹಿಂದೆ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿತ್ತು. ಅದರ ವಿಚಾರಣೆ ಕೈಗೆತ್ತಿಕೊಂಡಿರುವ ಕರ್ನಾಟಕ ಹೈಕೋರ್ಟ್‌ನಲ್ಲಿ ಗುರುವಾರ (ಮಾರ್ಚ್ 27) ಕೇಂದ್ರ ಸರ್ಕಾರ ತನ್ನ ಅಫಿಡವಿಟ್ ಅನ್ನು ಸಲ್ಲಿಸಿದ್ದು, ಎಕ್ಸ್ ತಾಣವು ಮಧ್ಯವರ್ತಿ ಕಟ್ಟುಪಾಡುಗಳನ್ನು ತಪ್ಪಿಸವುದಕ್ಕೆ ಪ್ರಯತ್ನಿಸುತ್ತಿದೆ. ಥರ್ಡ್ ಪಾರ್ಟಿ ಕಂಟೆಂಟ್‌ಗೆ ಅವಕಾಶ ಕೊಟ್ಟು ಅದರ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದೆ ಎಂದು ಪ್ರತಿಪಾದಿಸಿದೆ. ಕರ್ನಾಟಕ ಹೈಕೋರ್ಟ್ ಈ ಕೇಸ್‌ನ ವಿಚಾರಣೆಯನ್ನು ಏಪ್ರಿಲ್ 3ಕ್ಕೆ ಮುಂದೂಡಿದೆ.
ಸುಪ್ರೀಂ ಕೋರ್ಟ್‌ನಲ್ಲಿ ಇತ್ತೀಚಿನ ರಣವೀರ್ ಅಲಹಾಬಾಡಿಯಾ ಪ್ರಕರಣದಲ್ಲಿ ನೀಡಿದ ಅವಲೋಕನಗಳನ್ನು ಕೇಂದ್ರ ಸರ್ಕಾರವು ಉಲ್ಲೇಖಿಸಿದೆ. ಅಪೆಕ್ಸ್ ಕೋರ್ಟ್ ಸಹ ಸಾಮಾಜಿಕ ಮಾಧ್ಯಮದಲ್ಲಿ ಕಾನೂನುಬಾಹಿರ ಅನು...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.