ಭಾರತ, ಮೇ 19 -- ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ನಿವೃತ್ತ ಹಂಗಾಮಿ ನ್ಯಾಯಮೂರ್ತಿ ಎಸ್.ಆರ್.ನಾಯಕ್ (80) ಅವರು ಭಾನುವಾರ ಬೆಂಗಳೂರು ನಗರದಲ್ಲಿ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನ್ಯಾಯಮೂರ್ತಿ ಎಸ್ ಆರ್ ನಾಯಕ್ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ ಶಾಲಿನಿ ಎಸ್.ನಾಯಕ್, ಪುತ್ರ ಡಾ.ಎನ್.ಎಸ್.ರಾಹುಲ್, ಪುತ್ರಿ ನಿಶಾ ಗಾಂವ್ಕರ್ ಅವರನ್ನು ಅಗಲಿದ್ಧಾರೆ.
ಆರ್ಎಂವಿ ಎರಡನೇ ಹಂತದ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಧ್ಯಾಹ್ನ 1 ಗಂಟೆಯವರೆಗೂ ನ್ಯಾಯಮೂರ್ತಿ ಎಸ್ ಆರ್ ನಾಯಕ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನ್ಯಾಯಮೂರ್ತಿ ಎಸ್ ಆರ್ ನಾಯಕ್ ಅವರ ಅಂತ್ಯಕ್ರಿಯೆ ಇಂದು (ಮೇ 19) ಸಂಜೆ 4 ಗಂಟೆಗೆ ಹೆಬ್ಬಾಳ ಚಿತಾಗಾರದಲ್ಲಿ ನೆರವೇರಲಿದೆ' ಎಂದು ಕುಟುಂಬ ಮೂಲಗಳು ತಿಳಿಸಿವೆ.
ನ್ಯಾಯಮೂರ್ತಿ ಎಸ್ ಆರ್ ನಾಯಕ್ ಅವರು ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ, ಛತ್ತೀಸಗಡ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ, ಕರ್ನಾಟಕ ರಾಜ್ಯ ಮಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.